ಬೆಳಗಾವಿಯಲ್ಲಿ ಮುಂದಿನ 5 ದಿನ ಭಾರಿ ಮಳೆ Heavy rain saaksha tv
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಸದ್ಯ ಮಳೆರಾಯ ಅಬ್ಬರಿಸುತ್ತಿದ್ದು, ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿರುವ ಜನರನ್ನು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಈ ಕುರಿತು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಪ್ರತಿಕಾ ಪ್ರಕಟನೆ ಹೊರಡಿಸಿದ್ದು, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ದಿನಾಂಕ 20.11.2021 ರಿಂದ 25.11.2021ರವರೆಗೆ ಅತಿವೃಷ್ಟಿಯಾಗುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆ ನದಿ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳು ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು.
ಜನರು ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲ ಅಗತ್ಯ ರೀತಿಯ ಸಹಕಾರ ನೀಡಲಾಗುವುದು.
ಜಿಲ್ಲಾಡಳಿತ-ತಾಲೂಕಾಡಳಿತವು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದು ಕೋರಿದ್ದಾರೆ.