ಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ (Coastal Karnataka) ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಬುಧವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ (Bengaluru City) ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.