ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಮಿಂಚಾಂಗ್ ಚಂಡ ಮಾರುತಕ್ಕೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಿಚಾಂಗ್ ಚಂಡ ಮಾರುತದ ಎಫೆಕ್ಟ್‌ನಿಂದ ರಾಜ್ಯದಲ್ಲೂ ಮೋಡ ಕವಿವ ವಾತಾವರಣ ಇದೆ. ಅಲ್ಲಲ್ಲಿ ಮಳೆ ಹನಿ ಸುರಿಯುತ್ತಿವೆ. ಕೆಲವೆಡೆ ಚಳಿಯ ವಾತಾವರಣ ಇದೆ.
ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಮಿಚಾಂಗ್ ಚಂಡಮಾರುತದಿಂದ ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದಂತಹ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ತಮಿಳುನಾಡು, ಆಂಧ್ರ ಪ್ರದೇಶ ಕಾರಣವಾಗಿವೆ. ಹೀಗಾಗಿ ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.