ಬೆಂಗಳೂರು: ಅರಬ್ಬಿ ಸಮುದ್ರ ತೀರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಮುಂದಿನ 6 ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದಿನಿಂದ ಅಕ್ಟೋಬರ್ 16 ರ ವರೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.
ಅಕ್ಟೋಬರ್ 11 ರಿಂದ 14ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, 15 ಮತ್ತು 16 ರಂದು ವ್ಯಾಪಕ ಮಳೆಯಾಗು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.








