ರಾಜ್ಯದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಕರಾವಳಿಯ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜು. 26 ಹಾಗೂ 27ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಕೂಡ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ. ಕಾರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.








