ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಯೆಲ್ಲೋ ಅಲರ್ಟ್ ಘೋಷಣೆ
ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ ವಾಯು ಭಾರ ಕುಸಿತದಿಂದಾಗಿ ಕರ್ನಾಟಕದ ಹಲವಡೆ ಭಾರಿ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮನ್ಸೂಚನೆ ನೀಡಿದೆ.
ಸದ್ಯ ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದ್ದು ಇದರ ಪ್ರಭಾವದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಕಾರ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದ್ದ ಸುಮಾರು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಮಳೆಯಾಗಲಿದೆ.