ಜೂ.13ರಿಂದ ರಾಜ್ಯದಲ್ಲಿ ಬಿರುಸು ಪಡೆಯಲಿರುವ ಮುಂಗಾರು – ಭಾರೀ ಮಳೆಯಾಗುವ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಜೂ.13ರಿಂದ ಮುಂಗಾರು ಬಿರುಸು ಪಡೆದುಕೊಳ್ಳುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಬಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ.13ರಂದು ಆರೆಂಜ್, 14ರಂದು ರೆಡ್ ಅರ್ಲಟ್ ಘೋಷಿಸಿದೆ.
ಅಲ್ಲದೆ, ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್ ನೀಡಿದೆ. ಇನ್ನೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಚಿಕ್ಕಮಗಳೂರು, ಹಾಸನದಲ್ಲಿ ಜೂ.13ರಿಂದ ಮುಂದಿನ 2 ದಿನ ಆರೆಂಜ್ ಅರ್ಲಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ ಹಾಗೂ ಉತ್ತರ ಒಳನಾಡಿನ ಗದಗ, ಹಾವೇರಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು , ಯಾದಗಿರಿಯಲ್ಲಿ ಯೆಲ್ಲೋ ಅರ್ಲಟ್ ಘೋಷಣೆಯಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.