Heavy Rain | ಶಿವಮೊಗ್ಗದ 3 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಕರಾವಳಿಯಲ್ಲಿ ರಜೆ ಘೋಷಣೆ ಆಗಿದ್ದು ಮಲೆನಾಡಲ್ಲಿ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.
![Heavy Rain Holiday announced for schools in 3 taluks of Shimoga saaksha tv](http://saakshatv.com/wp-content/uploads/2022/07/basavasagara-300x174.jpg)
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು.12ರಂದು ಈ ತಾಲ್ಲೂಕುಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಎಂದಿನಂತೆ ಶಾಲೆಗಳು ನಡೆಯಲಿದ್ದು, ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.