Heavy Rain | ಗದಗ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ
ಗದಗ : ಒಂದು ಕಡೆ ಗೌರಿ ಗಣೇಶ ಹಬ್ಬಕ್ಕೆ ರಾಜ್ಯದೆಲ್ಲೆಡೆ ಸಿದ್ದತೆಗಳು ನಡೆಯುತ್ತಿದ್ದರೇ ಮತ್ತೊಂದು ಕಡೆ ಮಳೆರಾಯನ ರೌದ್ರಾವತಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಇದರಿಂದ ಗದಗದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹೌದು !! ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಠಿಯಾಗಿವೆ.

ಸಾಕಷ್ಟು ಜಮೀನುಗಳು ಜಲಾವೃತಗೊಂಡಿದ್ದರೇ ಅಪಾರ ಪ್ರಮಾಣ ಬೆಳೆಗಳು ನಾಶಗೊಂಡಿವೆ.
ಇದರಿಂದ ರೈತರು ಕಂಗಾಲಾಗಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ.
ಈ ನಡುವೆ ಮುಂದಿನ ಸೆಪ್ಟೆಂಬರ್ 2 ರವರೆಗೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಗದಗ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶ ಹೊರಡಿಸಿದ್ದಾರೆ.








