Heavy Rain in Belagavi | 13 ಸೇತುವೆಗಳ ಮುಳುಗಡೆ
ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಮುಂದುವರೆದಿದೆ.
ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಸಪ್ತ ನದಿಗಳ ಒಳ ಹರಿವು ಹೆಚ್ಚಳವಾಗಿದೆ.
ಇತ್ತ ಕೃಷ್ಣಾ ನದಿಗೆ 1 ಲಕ್ಷ 30 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಒಳ ಹರಿವಿದೆ.
ಇದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಮಲಪ್ರಭಾ ನದಿಗೆ 14 ಸಾವಿರ ಕ್ಯೂಸೆಕ್, ಘಟಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಕೆಳ ಹಂತದ 13 ಸೇತುವೆಗಳು ಜಲಾವೃತಗೊಂಡಿವೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ ಸೇತುವೆ, ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ಭೋಜವಾಡ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿಮಶಿ,
ಮಮದಾಪೂರ-ಹುನ್ನರಗಿ, ಕುನ್ನೂರ-ಬಾರವಾಡ ಸೇತುವೆ, ಗೋಕಾಕ ತಾಲೂಕಿನ ಗೋಕಾಕ-ಶಿಂಗಳಾಪೂರ ಸೇತುವೆ , ರಾಯಬಾಗ ತಾಲೂಕಿನ ಚಿಂಚಲಿ -ರಾಯಬಾಗ ಸೇತುವೆ,
ಹುಕ್ಕೇರಿ ತಾಲೂಕಿನ ಮೊದಗೆ-ಮರಣಹೋಳ ಸೇತುವೆ, ಮೂಡಲಗಿ ತಾಲೂಕಿನ ಅವರಾದಿ-ನಂದಗಾಂವ, ಸುಣದೋಳಿ-ಮೂಡಲಗಿ ಸೇತುವೆ, ಒಟ್ಟು 13 ಸೇತುವೆಗಳಲ್ಲಿ ಸಂಚಾರ ಸ್ಥಗಿತಗೊಂಡಿವೆ.
ಇತ್ತ ನದಿ ಪಾತ್ರದ ಗ್ರಾಮದಲ್ಲಿ ಪ್ರವಾಹದ ಭೀತಿ ಎದುರಾಗಿದೆ.