ಬೆಳಗಾವಿಯಲ್ಲಿ ಭಾರಿ ಮಳೆ : ಮನೆ ಕುಸಿತ belagavi saaksha tv
ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಖಡೇ ಬಜಾರ್ ನಲ್ಲಿ ಮನೆ ಕುಸಿದು ಬಿದ್ದಿದೆ. ಆದ್ರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದಲ್ಲದೆ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಜಿಲ್ಲೆಯ ಕಂಗ್ರಾಳ ಗಲ್ಲಿಯಲ್ಲಿ ಒಂದು ಮನೆ, ನಂದಗಡದಲ್ಲಿ ಎರಡು ಮನೆಗಳು ಕುಸಿದಿವೆ.
ಜೊತೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಇನ್ನು ಕಳೆದ ವರ್ಷ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆದ್ರೆ ಈ ಬಾರಿ ಕೊಯ್ನಾ ಡ್ಯಾಂನಲ್ಲಿ 60 ಟಿಎಂಸಿ ನೀರು ತುಂಬಿದೆ.
ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಸಧ್ಯಕ್ಕೆ ಪ್ರವಾಹ ಭೀತಿ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಾಹಿತಿ ನೀಡಿದ್ದಾರೆ.