Heavy Rain | ಬೆಳಗಾವಿಯಲ್ಲಿ ಭಾರಿ ಮಳೆ | ಮನೆಗಳಿಗೆ ನುಗ್ಗಿದ ನೀರು
ಬೆಳಗಾವಿ : ರಾಜ್ಯಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ.
ಇನ್ನೂ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲೂ ಮಳೆರಾಯ ರೌದ್ರನರ್ತನ ಮುಂದುವರೆದಿದ್ದು, ಜಿಲ್ಲೆಯಾದ್ಯಂತ ನಾನಾ ಅವಾಂತರಗಳು ಸೃಷ್ಟಿಯಾಗಿವೆ.

ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಧೋ ಎಂದು ಮಳೆ ಸುರಿದಿದ್ದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ವಾರ್ಡ್ ನಂ.8 ರಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಬೈಲಹೊಂಗಲ ಪಟ್ಟಣದ ಹುಡೇದ ಬಾಂವಿ ಹತ್ತಿರದ ಮನೆಗಳಿಗೂ ನೀರು ನುಗ್ಗಿದ್ದು, ಬಟ್ಟೆ, ಆಹಾರ ಧಾನ್ಯ, ಸೇರಿ ಮನೆಬಳಕೆಯ ವಸ್ತಗಳು ನೀರುಪಾಲಾಗಿವೆ.
ವಿಷಯ ತಿಳಿದು ಸ್ಥಳಕ್ಕೆ ಪುರಸಭೆ ಸದಸ್ಯ ಶಿವಾನಂದ ಕೋಲಕಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








