ಭಾರಿ ಮಳೆ – ಹಾನಿಗೀಡಾದ ಪ್ರದೇಶಗಳಿಗೆ ಸಿ ಎಂ ಬೇಟಿ, ಪರಿಶೀಲನೆ
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಂಗಳೂರು ಜಲಾವೃತವಾಗಿದ್ದು, ವಿವಿಧ ಪ್ರದೇಶಗಳು ಹಾನಿಗೀಡಾಗಿವೆ. ಹಾಗಾಗಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ಬಿಎಂಟಿಸಿ ಬಸ್ ಮೂಲಕ ನಗರ ಪ್ರದಕ್ಷಿಣೆ ಕೈಗೊಂಡ ಸಿ ಎಂ ಮೊದಲ ಹಂತದಲ್ಲಿ ಜೆಸಿ ನಗರ, ಕಮಲಾನಗರ, ನಾಗವಾರ, ಹೆಬ್ಬಾಳ ಎಸ್ ಟಿಪಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಸಚಿವರಾದ ವಿ. ಸೋಮಣ್ಣ, ಕೆ. ಗೋಪಾಲಯ್ಯ, ಸಂಸದ ಪಿ.ಸಿ. ಮೋಹನ್, ಬಿಬಿಎಂಪಿ ಆಯುಕ್ತರು, ಪೊಲೀಸ್ ಆಯುಕ್ತ ಪ್ರದೀಪ್ ರೆಡ್ಡಿ, ಸ್ಥಳೀಯ ಶಾಸಕರು, ಹಿರಿಯ ಅಧಿಕಾರಿಗಳು, ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSBommai ಅವರು ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. pic.twitter.com/vKKsIgJQm6
— CM of Karnataka (@CMofKarnataka) May 19, 2022
ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಸಮಗ್ರ ಅವಲೋಕನವನ್ನು ನಡೆಸಲಾಯಿತು. ಬೆಂಗಳೂರಿನ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ವ್ಯಾಲಿ ಆಧಾರಿತ ಅಭಿವೃದ್ಧಿ ಮಾಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಪರಿಶೀಲನೆ ಬಳಿಕ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಬೆಂಗಳೂರಿನಲ್ಲಿ 100ಮಿಲಿ ಮೀಟರ್ ಗೂ ಹೆಚ್ಚು ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡ ಕಾರಣ ಜನಜೀವನ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನಗರ ಪ್ರದಕ್ಷಿಣೆ ವೇಳೆ ಮುಖ್ಯಮಂತ್ರಿ ಸ್ಥಳೀಯರಿಂದ ಅಹವಾಲು ಸ್ವೀಕರಿಸುತ್ತಿದ್ದಾರೆ.