ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ Heavy rain saaksha tv
ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಆದ್ದರಿಂದ ಇಂದಿನಿಂದ ಆಗಸ್ಟ್ 24 ರವರೆಗೆ ಕರಾವಳಿ ಹಾಗೂ ಮಲೆನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇಂದು ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಆ.23 ಮತ್ತು 24 ರಂದು ಮಳೆ ಪ್ರಮಾಣ ಕಡಿಮೆಯಾಗಲಿದೆ. ಇತ್ತ ದಕ್ಷಿಣ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆಯಾಗಲಿದೆ. ಆ.23 ಮತ್ತು 24 ರಂದು ಮಳೆ ಪ್ರಮಾಣ ಏರಿಕೆಯಾಗಲಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿನ ವಾತಾವರಣೆ ಮುಂದುವರೆದಿದ್ದು, ಸಂಜೆ ವೇಳೆಗೆ ತುಂತುರು ಮಳೆ ಬೀಳುವ ಸಾಧ್ಯತೆಗಳಿವೆ.









