Heavy Rain | ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಈ ನಡುವೆ ಇಂದಿನಿಂದ ನಾಲ್ಕು ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಕೂಡ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ ನಾಲ್ಕು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ. ಚಾಮರಾಮನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.








