ಮುಂದಿನ 4 ದಿನ ರಾಜ್ಯದ ಈ ಭಾಗದಲ್ಲಿ ಭಾರಿ ಮಳೆ Heavy rain
ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದ್ದು, ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಣಿ ಬಳನಾಡಿನಲ್ಲಿ ಇಂದಿನಿಂದ ಆಗಸ್ಟ್ 12 ವರೆಗೆರೆ ಭಾರಿ ಮಳೆಯಾಗುವದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಅಲ್ಲದೆ ಉತ್ತರ ಒಳನಾಡಿನಲ್ಲಿ ಕೆಲವು ಭಾಗದಲ್ಲಿ ವರ್ಷಧಾರೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ 8 ರಿಂದ 12 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.









