ಜನವರಿ 8ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಜನವರಿ 04: ಕರ್ನಾಟಕದ ಹಲವೆಡೆ ಜನವರಿ 8ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಭಾನುವಾರ ರಾತ್ರಿ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ. ಜನವರಿ 8ರವರೆಗೂ ಇದೇ ವಾತಾವರಣ ಮುಂದುವರೆಯಲಿದ್ದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಜನವರಿ 7-8ರಂದು ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದೆ.
ಮೆಸ್ಕಾಂ ನಿಂದ ಜನತೆಗೆ ಕರೆಂಟ್ ಶಾಕ್
ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮೋಡ ಕವಿದ ವಾತಾವರಣವಿದ್ದು, ಬೆಳಗ್ಗೆ ಮಂಜು ತುಂಬಿರಲಿದೆ. ಬೆಂಗಳೂರಿನಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಬೀದರ್‌ನಲ್ಲಿ 10.2 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಇಲ್ಲಿ ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಚಳಿ ಹಾಗೂ ಒಣಹವೆ ಮುಂದುವರೆಯಲಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ,ಗದಗ, ಹಾವೇರಿ, ಕೊಪ್ಪಳದಲ್ಲಿ ಜನವರಿ 8ರವರೆಗೂ ಮಳೆಯಾಗುವ ಸಾಧ್ಯತೆ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1345760948200513538?s=19
https://twitter.com/SaakshaTv/status/1345760563486289920?s=19








