ಜುಲೈ. 22ರವರೆಗೂ ರಾಜ್ಯದಲ್ಲಿ ಧಾರಾಕಾರ ಮಳೆ – ಹವಾಮಾನ ಇಲಾಖೆ
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ , ಕರಾವಳಿ ಬಾಗ , ದಕ್ಷಿಣ ಒಳನಾಡು , ಮಲೆನಾಡಿನಲ್ಲಿ ವರುನಾರ್ಭಟ ಜೋರಾಗಿದೆ.. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.. ಉತ್ತರಕನ್ನಡ , ಕೊಡಗು , ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟುಬಿಡದೇ ಮಳೆಯಾಗ್ತಿದೆ.. ಇದೀಗ ಜುಲೈ. 22ರವರೆಗೆ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.22ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ಇನ್ನೂ ಕೇರಳದಿಂದ ಮಹಾರಾಷ್ಟ್ರದೆಡೆಗೆ ವೇಗವಾದ ಮೇಲ್ಮೈ ಸುಳಿಗಾಳಿ ಬೀಸುತ್ತಿದೆ. ಇದರ ಪ್ರಭಾವದಿಂದಾಗಿ ರಾಜ್ಯ ಕರಾವಳಿ ಭಾಗದಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಲಿದೆ. ಜೊತೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಸಾಕಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ..
ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗಿನಲ್ಲಿ ಮಳೆಯ ಆರ್ಭಟ ದೀರ್ಘಕಾಲದವರೆಗೆ ಮುಂದುವರೆಯಲಿದೆ ಎಂದು ಮುನ್ಸೂಚನೆ ಸಿಕ್ಕಿದೆ. ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ಹಾಗೂ 21ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಜುಲೈ 20 ಹಾಗೂ 21ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಧಾರವಾಡ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಮೈಸೂರು ಜಿಲ್ಲೆಗಳಲ್ಲಿ ನಾಳೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.
“ಕಾಶ್ಮೀರದ ಜನರಿಗೆ ನಾನೇ ಬ್ರಾಂಡ್ ಅಂಬಾಸಿಡರ್” – ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್..!