ಕೇರಳದಲ್ಲಿ ಭಾರೀ ಮಳೆ, 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದಲ್ಲದೇ ಹಲವೆಡೆ ಪ್ರವಾಹ ಮುನ್ನೆಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ
ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ, ನದಿಗಳು ಉಕ್ಕಿ ಹರಿಯುತ್ತಿವೆ, ವಿದ್ಯುತ್ ತಂತಿಗಳು ಹಾನಿಗೊಳಗಾಗಿವೆ ಮತ್ತು ಬೆಳೆಗಳು ನಾಶವಾಗಿವೆ. ಈ ನಡುವೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮುಂಗಾರು ಪೂರ್ವ ಸಿದ್ಧತೆಗಾಗಿ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿದರು. ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.