ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗದ 6 ಸೇತುವೆಗಳು ಮುಳುಗಡೆಯಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿತ್ತಿರುವ ಕಾರಣ ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಕೃಷ್ಣೆಗೆ 62 ಸಾವಿರ ಕ್ಯೂಸೆಕ್‍ನಷ್ಟು ಒಳ ಹರಿವು ಹೆಚ್ಚಳವಾಗಿದ್ದು, ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ ಎಂದು ಚಿಕ್ಕೋಡಿ ಉಪ-ವಿಭಾಗೀಯ ಅಧಿಕಾರಿ ರವೀಂದ್ರ ಕರಲಿಂಗಣ್ಣವರ ತಿಳಿಸಿದ್ದಾರೆ.
ದೂಧಗಂಗಾ ನದಿಗೆ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ.
ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಮಳೆಯ ಜೊತೆಗೆ ಚಿಕ್ಕೋಡಿ ಭಾಗದ ಕೃಷ್ಣಾ ನದಿ ತೀರದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...








