ಬೆಂಗಳೂರು : (Heavy rain) ರಾಜ್ಯದಲ್ಲಿ ಈಗಾಗಲೇ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಈ ಮಧ್ಯೆ ಮುಂದಿನ 48 ಗಂಟೆಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.(Heavy rain)

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರಿನ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ : ವಿಧಾನಸೌಧದಲ್ಲಿ ಭ್ರಷ್ಟಾಚಾರ ಭರತ ನಾಟ್ಯ ಮಾಡುತ್ತಿದೆ : ಜಿ.ಪರಮೇಶ್ವರ್
ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಭಾರಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ 64 ಮಿ ಮಿ ಯಿಂದ 204 ಮಿ ಮಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ವಿಪತ್ತು ನಿರ್ವಹಣಾ ತಂಡಗಳಿಗೆ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ ಬುದ್ಧಿಮಾಂದ್ಯ ಪಕ್ಷ : ಖುಷ್ಬೂ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








