ದಕ್ಷಿಣ ಕನ್ನಡದ ಪ್ರಮುಖ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಗಾಳಿ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಸಂಜೆಯ ವೇಳೆ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಾನ್ಸೂನ್ ಪೂರ್ವ ಮಳೆ ತಂಪೆರೆದಿದೆ. ಪುತ್ತೂರಿನಲ್ಲಿ ಆಲಿಕಲ್ಲು ಸಹಿತ ಭಾರಿಮಳೆಯಾಗಿದ್ದು, ಕರಾವಳಿಯ ಪ್ರಮುಖ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಗಾಳಿ ಮಳೆಯಾಗಿದೆ.

ಮಾರ್ಚ್ 21 ರಿಂದ ಕೇರಳ, ತಮಿಳುನಾಡು, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಾನ್ಸೂನ್ ಪೂರ್ವ ಮಳೆ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಸ್ಕೈಮೆಟ್ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 28ರವರೆಗೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಕರಾವಳಿಯ ಕೆಲವು ಪ್ರದೇಶಗಳಲ್ಲಿ ಇತ್ತೀಚೆಗೆ ಸಂಜೆಯ ವೇಳೆ ಮಳೆಯಾಗುತ್ತಿದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಾರ್ಕಳ, ಮುಂತಾದ ಸ್ಥಳಗಳಲ್ಲಿ ಈಗಾಗಲೇ ಮಳೆಯಾಗಿದೆ. ಮಳೆಯಿಂದಾಗಿ, ತಾಪಮಾನವು ಸ್ವಲ್ಪ ಕಡಿಮೆಯಾಗಿದೆ. ಈ ವರ್ಷದ ಆರಂಭದಲ್ಲಿ ಈ ಬಾರಿ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಕೆಲವು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯ ವಿಜ್ಞಾನಿ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ. ಗುಡುಗು ಮತ್ತು ಮಿಂಚಿನೊಂದಿಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.
https://twitter.com/SaakshaTv/status/1373470478313140227?s=19
https://twitter.com/SaakshaTv/status/1374338827095924742?s=19
https://twitter.com/SaakshaTv/status/1373432832542961666?s=19
https://twitter.com/SaakshaTv/status/1372752897448931330?s=19








