ಪಕ್ಕದ ತಮಿಳುನಾಡಿನ ಹಲವೆಡೆ ಭರ್ಜರಿ ಮಳೆಯಾಗಿದ್ದು, ಜನ – ಜೀವನ ಅಸ್ತವ್ಯಸ್ಥಗೊಂಡಿದೆ.
ತೂತುಕುಡಿ ಸೇರಿದಂತೆ ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ಹಲವು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು, ಪ್ರಯಾಣಿಕರು ತೊಂದರೆ ಎದುರಿಸುವಂತಾಗಿದೆ. ಅಲ್ಲದೇ, ಇಂದೂ ಕೆಲವಡೆ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕೇರಳದ ಹಲವು ಪ್ರದೇಶಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.