ರಾಜ್ಯದಲ್ಲಿ ಮುಂದಿನ ನಾಲ್ಕು ದಿನದವರೆಗೂ ಭಾರೀ ಮಳೆ Heavy rain
ಬೆಂಗಳೂರು : ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಈಗಾಗಲೇ ಮಳೆರಾಯ ಅಬ್ಬರಿಸುತ್ತಿದ್ದಾರೆ.
ಈ ಅಬ್ಬರ ಇನ್ನೂ ನಾಲ್ಕು ದಿನಗಳವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಂದರೇ ರಾಜ್ಯದಲ್ಲಿ ಮುಂದಿನ ನಾಲ್ಕು ದಿನದವರೆಗೂ ಭಾರೀ ಮಳೆಯಾಗಲಿದೆ.
ಬೆಂಗಳೂರು ನಗರ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಇನ್ನೆರಡು ದಿನ ಮೋಡಕವಿದ ವಾತಾವರಣ ಇರಲಿದ್ದು. ಸಂಜೆ ವೇಳೆಗೆ ಮಳೆಯಾಗಲಿದೆ.
ಇದಲ್ಲದೆ ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆ ಬೀಳುವ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸದ್ಯ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಖ್ಯವಾಗಿ ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ.