ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ Heavy rain saaksha tv
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವತ್ತು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ನಾಳೆಯಿಂದ 3ರವರೆಗೆ ವ್ಯಾಪಕ ಮಳೆ ಹಾಗೂ ಗುಡುಗು, ಮಿಂಚು ಉಂಟಾಗುವ ಸಾಧ್ಯತೆಯಿದೆ.
ಭಾರಿ ಮಳೆ ಸಾಧ್ಯತೆ ಇರುವುದರಿಂದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಈ ಜಿಲ್ಲೆಗಳ ಜೊತೆಗೆ ಚಾಮರಾಜನಗರ, ಮೈಸೂರು ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಇದಲ್ಲದೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.