ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಂಭವವಿದೆ.








