ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ Heavy rain Saaksha tv
ಬೆಂಗಳೂರು : ಈಗಾಗಲೇ ಅಕಾಲಿಕ ಮಳೆಯಿಂದಾಗಿ ತತ್ತರಿಸಿರುವ ಜನರಿಗೆ ಹವಾಮಾನ ಇಲಾಖೆ ಶಾಕಿಂಗ್ ಸುದ್ದಿ ನೀಡಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿ ಮತ್ತು ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಸಾಧಾರಣ ಮಳೆ ಬೀಳಲಿದೆ.
ರಾಜ್ಯ ರಾಜಧಾನಿ ಸದ್ಯ ಶೀತಗಾಳಿ ಬೀಸುತ್ತಿದ್ದ, ಇದು ಹೀಗೆ ಮುಂದುವರೆಯಲಿದೆ. ಸಂಜೆ ಹೊತ್ತಿಗೆ ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ.
ಇನ್ನೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ.
ಇನ್ನುಳಿದಂತೆ ಹಳೆ ಮೈಸೂರು ಭಾಗದಲ್ಲಿ ತುಂತುರು ಮಳೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.