Heavy rain | ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ಮುಂದಿನ ನಾಲ್ಕೈದು ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಉತ್ತರ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.

ಭಾನುವಾರ ಬೆಳಗ್ಗೆ 8.30ರಿಂದ ಸೋಮವಾರ ಬೆಳಗ್ಗೆ 8.30ರ ವರೆಗೆ ಬೀದರ್, ಯಾದಗಿರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದ್ದು, ಆ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಉಳಿದಂತೆ ಈ ಅವಧಿಯಲ್ಲಿ ಉಳಿದ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.