ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ Heavy Rain saaksha tv
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ವರುಣ ಆರ್ಭಟಿಸುತ್ತಿದ್ದು, ಇದು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು ಬೆಂಗಳೂರು ಕೇಂದ್ರ ಹವಾಮಾನ ಇಲಾಖೆ ನಿರ್ದೇಶಕ ಎಸ್.ಅಡಿಗ, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಮಳೆಯಾಗಲಿದೆ.
ಮುಖ್ಯವಾಗಿ ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದರು.
ನಿರಂತರ ಮಳೆಗೆ ತತ್ತರಿಸಿರುವ ಬೆಂಗಳೂರಿನಲ್ಲಿ ಇನ್ನೂ ಕೆಲ ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೂಚನೆ ನೀಡಿದೆ.
ಈಗಾಗಲೇ ಸುರಿದಿರುವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಮನೆಗೆ ತೆರಳಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.