ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ Heavy rain saaksha tv
ಬೆಂಗಳೂರು : ರಾಜ್ಯದಲ್ಲಿ ಸದ್ಯ ವರುಣನ ಆರ್ಭಟ ಜೋರಾಗಿದೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ವಿವಿದೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ.
ಈ ಮಧ್ಯೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆಂಧ್ರ ಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ವರ್ಷಧಾರೆಯಾಗಲಿದೆ.
ಅಲ್ಲದೆ ಅಕ್ಟೋಬರ್ 18ರವರೆಗೂ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಮಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಅವಾಂತರ ಮುಂದುವರೆದಿದೆ. ನಿನ್ನೆ ಸಂಜೆಯಾಗ್ತಿದ್ದಂತೆ ವರುಣನ ಆರ್ಭಟ ಜೋರಾಗಿತ್ತು.
ಧೋ ಎಂದು ಸುರಿದ ಮಳೆಗೆ ನಗರದ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದವು. ಇದರಿಂದ ವಾಹನ ಸವಾರರು ಪರದಾಡಿದ್ರು.
ಅಲ್ಲದೆ ಸಾಕಷ್ಟು ಮನೆಗಳಿಗೆ ಮಳೆ ನೀರು ನುಗ್ಗಿದ ಕಾರಣ ಜನರು ರಾತ್ರಿವಿಡಿ ಜಾಗರಣೆ ಮಾಡುವಂತಾಯಿತು.