ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗ ಮತ್ತೆ ಕರಾವಳಿ ಭಾಗ, ಬಳ್ಳಾರಿ, ಧಾರವಾಡ ಮತ್ತು ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜ್ಯದಲ್ಲಿ ಈಗಾಗಲೇ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಕಲಬುರಗಿಯ ಅಫಜಲಪುರ, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ.
ಕಾಳಗಿ ತಾಲೂಕಿನ ನೀಲಕಂಠೇಶ್ವರ ದೇಗುಲ ಮುಳುಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸಹ ಸಂಪೂರ್ಣ ಜಲಾವೃತವಾಗಿದೆ.







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
