ನಾಳೆಯಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ Heavy rain saaksha tv
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವತ್ತು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಾಳೆಯಿಂದ 3ರವರೆಗೆ ವ್ಯಾಪಕ ಮಳೆ ಹಾಗೂ ಗುಡುಗು, ಮಿಂಚು ಉಂಟಾಗುವ ಸಾಧ್ಯತೆಯಿದೆ.
ಭಾರಿ ಮಳೆ ಸಾಧ್ಯತೆ ಇರುವುದರಿಂದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇತ್ತ ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.