ಜುಲೈ 14ರವರೆಗೆ ರಾಜ್ಯದಲ್ಲಿ ಭಾರಿ ಮಳೆ Heavy rain
ಬೆಂಗಳೂರು : ಜುಲೈ 14 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುಚ್ಚೆನ್ನರಿಕೆ ನೀಡಿದೆ. ಅಲ್ಲದೆ ಅತೀ ಹೆಚ್ಚು ಮಳೆ ಬೀಳಲಿರುವ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದ್ದು, ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇತ್ತ ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.








