ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರಿ ಮಳೆ Heavy rain saaksha tv
ಬೆಂಗಳೂರು : ರಾಜ್ಯದಲ್ಲಿ ಸದ್ಯ ಮಳೆಯ ಆರ್ಭಟ ಜೋರಾಗಿದೆ. ಈ ಅಬ್ಬರ ಹೀಗೆ ಮುಂದುವರೆಯಲಿದ್ದು, ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ವರ್ಷಧಾರೆಯಾಗುತ್ತಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೆ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ತುಂತುರು ಮಳೆ ಆರಂಭವಾಗಿತ್ತು.
ಕೆಲ ಪ್ರದೇಶಗಳಲ್ಲಿ ಜಿಟಿಜಿಟಿ ಮಳೆಯಾದರೇ ಇನ್ನೂ ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ.









