ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವರುಣನ ಆರ್ಭಟ ಜೋರಾಗಿದೆ. ಮಳೆರಾಯನ ಅಬ್ಬರಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಇತ್ತ ನಿನ್ನೆ ಸುರಿದ ಮಳೆಗೆ ಮೆಟ್ರೊ ಸಿಟಿ ಬೆಂಗಳೂರು ಕೆರೆಯಂತಾಗಿತ್ತು.
ಈ ಮಧ್ಯೆ ಮುಂದಿನ 24 ಗಂಟೆ ರಾಜ್ಯದಲ್ಲಿ ಮತ್ತಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿ ವಾಯುಭಾರ ಕುಸಿತ ಪರಿಣಾಮ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ,
ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ,
ಇದನ್ನೂ ಓದಿ : ಇಲ್ಲಿದೆ ಜಂಬೂ ಸವಾರಿಯಲ್ಲಿ ಭಾಗವಹಿಸುವ ಕಲಾ ತಂಡಗಳು ಮತ್ತು ಸ್ತಬ್ಧಚಿತ್ರಗಳ ವಿವರ
ಶಿವಮೊಗ್ಗ ಮತ್ತು ತುಮಕೂರಿನಲ್ಲಿ ನಾಳೆ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಷಿಸಲಾಗಿದೆ.
ನಿನ್ನೆ ಮಹಾ ಮಳೆಗೆ ನಲುಗಿದ್ದ ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಸುರಿದ ಮಳೆ ನಾನಾ ಅವಾಂತರಗಳನ್ನು ಸೃಷ್ಠಿಸಿದೆ.
ರಸ್ತೆಗಳೆಲ್ಲಾ ಕೆರೆಗಳಂತಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು.
ಇದನ್ನೂ ಓದಿ : ಮಹಾಮಳೆಗೆ ಕೊಚ್ಚಿಹೋಯ್ತು ಬೆಂಗಳೂರು: ಒಂದೇ ದಿನ ದಾಖಲೆ ಮಳೆ..!
ಅಂದಹಾಗೆ ಕಳೆದ ಒಂದು ವಾರದಿಂದ ಬೆಂಗಳೂರು ನಗರದಲ್ಲಿ ಅಧಿಕ ಮಳೆಯಾಗಿದೆ.
ವಾಡಿಕೆಯಂತೆ 32 ಮಿಮೀ ಮಳೆಯಾಗಬೇಕಿತ್ತು. 102 ಮಿಮೀ ಮಳೆಯಾಗಿದ್ದು, ಶೇ.223 ಹೆಚ್ಚು ಮಳೆ ಸುರಿದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel