ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಸುರಿಯಲಿದೆ. ಅದರಲ್ಲೂ ಬೆಂಗಳೂರಿನಲ್ಲಿ ತುಂತುರು ಮಳೆ ಸುರಿಯುವ ಭೀತಿ ಇದ್ದು, ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿ ಜನರನ್ನು ಕಾಡಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರ ಜೊತೆಗೆ, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಉ. ಕನ್ನಡದಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಎಲ್ಲೂ ಶಾಲೆಗಳಿಗೆ ರಜೆ ಇಲ್ಲ
ಶೈಕ್ಷಣಿಕ ಪ್ರವಾಸ ರದ್ದು: ಶಿಕ್ಷಣ ಇಲಾಖೆ ಸ್ಪಷ್ಟನೆ
ಶಿಕ್ಷಣ ಇಲಾಖೆ 2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈಗಾಗಲೇ ಪ್ರವಾಸಕ್ಕೆ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಕೂಡ ತಿಳಿಸಿದೆ....