ಉಡುಪಿಯಲ್ಲಿ ಮತ್ತೆ ಚುರುಕಾದ ಮುಂಗಾರು udupi
ಉಡುಪಿ : ಜಿಲ್ಲೆಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಇಂದು ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ.
ಕಳೆದ ನಾಲ್ಕು ದಿನಗಳಿಂದ ಮಳೆ ಕೊಂಚ ಬಿಡುವು ನೀಡಿತ್ತು. ಆದ್ರೆ ಇದೀಗ ಮತ್ತೆ ವರ್ಷಧಾರೆ ಆರಂಭವಾಗಿದೆ.
ಇಂದು ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದೆ. ನಗರದ ಹೊರಭಾಗದಲ್ಲೂ ನಿರಂತರ ಮಳೆಯಾಗುತ್ತಿದೆ.
ಜಿಲ್ಲೆಯ ಕರಾವಳಿ ತಾಲೂಕುಗಳಾಗಿರುವ ಕಾಪು, ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಸಹ ಬಿರುಸಿನ ಮಳೆ ಸುರಿಯುತ್ತಿದ್ದು, ಕಾರ್ಕಳ, ಕುಂದಾಪುರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ.
ಇತ್ತ ಜಿಲ್ಲೆಯಲ್ಲಿ ತಿಂಗಳಾಂತ್ಯದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.