ನಾಳೆಯಿಂದ ರಾಜ್ಯದ ವಿವಿದೆಡೆ ಭಾರಿ ಮಳೆ Heavy rain saaksha tv
ಬೆಂಗಳೂರು : ಶಾಹೀನ್ ಚಂಡಮಾರುತ ಪ್ರಭಾವ ರಾಜ್ಯದ ಮೇಲೂ ಬೀರಿದ್ದು, ಅಕ್ಟೋಬರ್ ೫ ರಿಂದ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.
ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದಲ್ಲದೆ ಬಿಜಾಪುರ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ಇದೆ.









