Heavy rain in yadgir | ಗವಿಸಿದ್ದೇಶ್ವರ ದೇಗುಲ ಜಲಾವೃತ
ಯಾದಗಿರಿ : ಜಿಲ್ಲೆಯಾದ್ಯಂತ ನಿನ್ನೆ ಭಾರಿ ಮಳೆಯಾಗಿದೆ. ಪರಿಣಾಮ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಿಂತನಹಳ್ಳಿ ಸಮೀಪದ ಗವಿಸಿದ್ದೇಶ್ವರ ಮಂದಿರ ಜಲಾವೃತಗೊಂಡಿದೆ.
ಬೆಟ್ಟದ ಕೆಳಭಾಗದಲ್ಲಿ ದೇವಾಲಯವಿದ್ದು, ಬೆಟ್ಟದ ಮೇಲ್ಭಾಗದಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ದೇವಾಲಯ ಸಂಪೂರ್ಣ ನೀರಿನಮಯವಾಗಿದೆ. ಇದರಿಂದ ದೇವರ ದರ್ಶನಕ್ಕೆ ಬ್ರೇಕ್ ಹಾಕಲಾಗಿದೆ.

ಇತ್ತ ಮಂದಿರ ಮುಂಭಾಗದಲ್ಲಿ ಭಾರಿ ಪ್ರಮಾಣದಲ್ಲಿ ನೀರಿ ಹರಿಯುತ್ತಿದೆ. ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.
ಇನ್ನು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.