ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 8 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 10ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಬಾಗಲಕೋಟೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅ. 3ರಂದು ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅ. 10ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರವೂ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿದಿರುವ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್, ಅಕ್ಟೋಬರ್ ತಿಂಗಳಲ್ಲಿ ಸಂಪೂರ್ಣವಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.