ಕಳೆದ ಹಲವು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಶನಿವಾರ ಕರಾವಳಿಯಲ್ಲಿ ಕೊಂಚ ವಿರಾಮ ನೀಡಿದ್ದ ಮಳೆರಾಯ ಇಂದು ವ್ಯಾಪಕವಾಗಿ ಸುರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರದಿಂದ ಮತ್ತಷ್ಟು ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಕುಂದಾಪುರ, ಭಾಗಮಂಡಲ, ಉಪ್ಪಿನಂಗಡಿ, ಶೃಂಗೇರಿ, ಮಾಣಿ, ಯಲ್ಲಾಪುರ, ಮುಲ್ಕಿ, ಜಯಪುರ, ಮಾಣಿ, ಯಲ್ಲಾಪುರ, ಕೊಪ್ಪ, ದಾವಣಗೆರೆ, ಮೂರ್ನಾಡು, ನಾಪೊಕ್ಲು, ಹಳಿಯಾಳ, ಸುಳ್ಯ, ಮಂಗಳೂರು, ಹಾವೇರಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.