ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ (Rain) ಭಾರೀ ಮಳೆಯಾಗುತ್ತಿದೆ. ಹೀಗಾಗಿ ಹಲವೆಡೆ ಜನ-ಜೀವನ ಅಸ್ತವ್ಯಸ್ಥಗೊಂಡಿದೆ. ಮುಂದಿನ 5 ದಿನಗಳ ಕಾಲ ಕೂಡ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸಾರ್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದೆ.