ಜೂನ್ ತಿಂಗಳು ಸಂಪೂರ್ಣವಾಗಿ ಕೈ ಕೊಟ್ಟಿದ್ದ ಮಳೆರಾಯ ಈಗ ನಿರೀಕ್ಷೆ ಮೂಡಿಸಿದ್ದಾನೆ. ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆ ಇದೆ.
ಮಲೆನಾಡಿನ ಶಿವಮೊಗ್ಗದಲ್ಲಿ ಕೂಡ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








