ರಾಜ್ಯದ ಹಲವೆಡೆ ಜೂನ್ 27ರ ವರೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲಗೆಳಲ್ಲಿ ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಳ್ಳಾರಿ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬಿಪೋರ್ ಜಾಯ್ ಚಂಡಮಾರುತವು ತೇವಾಂಶ ಭರಿತ ಮೋಡಗಳನ್ನು ಸೆಳೆದುಕೊಂಡ ಪರಿಣಾಮ, ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಇಸಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕ ವಾತಾವರಣ ಉಂಟಾಗಿದ್ದು, ಉತ್ತರ ಒಳನಾಡಿನಲ್ಲಿಯೂ ಜೂ. 25ರಿಂದ ಮಳೆಯಾಗುವ ಸಾಧ್ಯತೆ ಇದೆ.








