ರಾಜ್ಯ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ರಾಜ್ಯಗಳಾದ ಕೇರಳ (Kerala) ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಹಾಗೂ ಕೇರಳ, ಲಕ್ಷದ್ವೀಪ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಪ-ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಹಾಗೂ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಭಾಗಶಃ ಮಳೆಯಾಗಬಹುದು.