ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯ ಹವಾಮಾನ ಇಲಾಖೆ ಭಾರೀ ಮಳೆಯಾಗುವುದಾಗಿ ಭವಿಷ್ಯ ನುಡಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ, ಉಡುಪಿ ಉತ್ತರಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕೆಲ ದಿನಗಳಿಂದಲೂ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಒಂದೆಡೆ ಹೆಮ್ಮಾರಿ ಕೊರೊನಾ ಕಾಟ, ಮತ್ತೊಂದೆಡೆ ವರುಣನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬೆನ್ನಲ್ಲೇ ನಾಳೆ ಮತ್ತೆ ಮಳೆ ರೌದ್ರಾವತಾರ ತಾಳುವ ಮುನ್ಸೂಚನೆ ಸಿಕ್ಕಿರುವುದು ರೈತರು ಹಾಗೂ ಜನರಲ್ಲಿ ಆತಂಕ ಮೂಡಿಸಿದೆ. ಇನ್ನೂ ಆಗಸ್ಟ್ 6ರಿಂದ 9ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರೆಯುವ ಸಾಧ್ಯತೆಯಿರುವ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ದೇ ಸಮುದ್ರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ದೇ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025
Haveri Zilla Panchayat Recruitment 2025 : ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ...