ಉತ್ತರ ಕನ್ನಡ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ಅದರಲ್ಲೂ ನಿನ್ನೆಯಿಂದ ವರುಣ ರೌದ್ರಾವತಾರವನ್ನೇ ತೋರಿದ್ದು, ಗಾಳಿ ಸಹಿತ ಭಾರೀ ಮಳೆಗೆ ಜನರು ಕಂಗಾಲಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಗಾಳಿ ಸಹಿತ ಮಳೆಗೆ ಹಲವೆಡೆ ಬೃಹದಾಕಾರದ ಮರಗಳು ಉರುಳಿದ್ದು, ವಿದ್ಯುತ್ ತಂತಿಗಳು ನೆಲಕ್ಕುರುಳಿ, ಜನರು ಜೀವವನ್ನು ಕೈಯ್ಯಲ್ಲಿ ಹಿಡಿದು ಓಡಾಡುವಂತಹ ಪರಿಸ್ಥಿತಿ ಎದುರಾಗಿದೆ. ಅಷ್ಟೇ ಅಲ್ದೇ ಕೆಲವು ಮನೆಗಳಿಗೂ ಧಕ್ಕೆಯುಂಟಾಗಿದೆ. ಇದರ ನಡುವೆ ಇಂದಿನಿಂದ 8ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಸಹ ಘೋಷಣೆ ಮಾಡಲಾಗಿದೆ.








