ಆಗಸ್ಟ್ 1 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ Heavy rain
ಬೆಂಗಳೂರು : ಇವತ್ತಿನಿಂದ ಆಗಸ್ಟ್ ಒಂದನೇ ತಾರೀಕಿನವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಕರಾವಳಿ ಭಾಗದಲ್ಲಿ ವ್ಯಾಪಕ ವರ್ಷಧಾರೆ ಆಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ 4 ಸೆಂ.ಮೀ ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂ.ಮೀ ಮಳೆಯಾಗಿದೆ.
ಇದು ಹೀಗೆ ಮುಂದುವರೆಯಲಿದ್ದು, ಆಗಸ್ಟ್ 1ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕರಾದ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಇನ್ನು ರಾಜ್ಯ ರಾಜಧಾನಿಯಲ್ಲಿ ಮುಂದಿನ ಎರಡು ದಿನ ಮಾತ್ರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇದೇ ವೇಳೆ ತಿಳಿಸಿದ್ದಾರೆ.