ಭಾರೀ ಗಾಳಿ ಮಳೆ : ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ Heavy Rain
ಉಡುಪಿ : ಜಿಲ್ಲೆಯಾದ್ಯಂತ ಭಾರಿ ಗಾಳಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಗಾಳಿ ಸಹಿತ ಮಳೆಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಕೂಡ ಆಗಿದೆ.
ಇನ್ನೂ ಕೆಲವು ದಿನ ಭಾರೀ ಮಳೆ ಸಾಧ್ಯತೆ ಇರುವುದರಿಂದ ಮೀನುಗಾರರು ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.