ರಾಯಚೂರಿನಲ್ಲಿ ಮಳೆ ಅಬ್ಬರ : ಮನೆಗಳಿಗೆ ನುಗ್ಗಿದ ನೀರು raichur
ರಾಯಚೂರು : ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರು ಶುರುವಾಗಿದ್ದು, ನಿನ್ನೆ ರಾತ್ರಿಯಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ನಾನಾ ಅವಾಂತರಗಳು ಸೃಷ್ಠಿಯಾಗಿವೆ.
ಅದರಲ್ಲೂ ವರ್ಷಧಾರೆಯ ಆರ್ಭಟಕ್ಕೆ ಮಸ್ಕಿ ಪಟ್ಟಣದಲ್ಲಿ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.
ಭಾರಿ ಮಳೆಯಿಂದಾಗಿ ರಾಜಕಾಲುವೆಯ ನೀರು ಮನೆಗಳಿಗೆ ನುಗ್ಗಿದ್ದು, ನೀರು ಹೊರಹಾಕಲು ನಿವಾಸಿಗಳು ರಾತ್ರಿಯೆಲ್ಲಾ ಜಾಗರಣೆ ಮಾಡಿದ್ದಾರೆ.
ಮನೆ ಹೊರಗಡೆ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಮುಳುಗಡೆಯಾಗಿವೆ. ಮನೆಯಲ್ಲಿನ ದವಸ ಧಾನ್ಯಗಳು ನೀರುಪಾಲಾಗಿವೆ.
ಸದ್ಯ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮಳೆ ಹಾಗೂ ವೀಕೆಂಡ್ ಕಫ್ರ್ಯೂ ನಡುವೆಯೂ ರಾಯಚೂರು ನಗರದಲ್ಲಿ ತರಕಾರಿ, ಹಣ್ಣು, ಹೂ ವ್ಯಾಪಾರ ನಡೆದಿದೆ.









